ಆಟೋ ರಿಕ್ಷಾ ಚಾಲಕರಿಂದ ಪ್ರತಿಭಟನೆ

auto
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಹುಬ್ಬಳ್ಳಿ ಮಿನಿ ವಿಧಾನಸೌಧಧ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸುರಕ್ಷಾ ಸಂಘದ ಧಾರವಾಡ ಜಿಲ್ಲಾ ಘಟಕ ಹಾಗೂ ದಿ. ಲಕ್ಷ್ಮಣ ಹಿರೇಕೆರೂರ ಆಟೋ ರಿಕ್ಷಾ ಚಾಲಕರ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ರವಾನಿಸಲಾಯಿತು.

ಆಟೋ ರಿಕ್ಷಾಗಳಿಗೆ ಉಚಿತವಾಗಿ ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಡಬೇಕು. ಆಟೋ ರಿಕ್ಷಾ ಚಾಲಕರನ್ನು ಇಎಸ್​ಐ ವ್ಯಾಪ್ತಿಗೆ ತರಬೇಕು. ಅಪಘಾತದಲ್ಲಿ ಮರಣ ಹೊಂದಿದರೆ 10 ಲಕ್ಷ ರೂ. ಪರಿಹಾರ ನೀಡಬೇಕು. 60 ವರ್ಷ ಮೇಲ್ಪಟ್ಟ ಆಟೋ ರಿಕ್ಷಾ ಚಾಲಕರಿಗೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು. ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರು.

ಚಿದಾನಂದ ಸವದತ್ತಿ, ಪುಂಡಲೀಕ ಬಡಿಗೇರ, ಮುಷ್ತಾಕ ಕರ್ಜಗಿ, ರಾಜು ಕಾಲವಾಡ, ಮಂಜುನಾಥ ಉಳ್ಳಾಗಡ್ಡಿ, ಚನ್ನಬಸಪ್ಪ ಎಲಿಗಾರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net