

ಹೆಬ್ರಿ: ಮುದ್ರಾಡಿ ಶ್ರೀ ಮಹಾಗಣಪತಿ ಆಟೋ ರಿಕ್ಷಾ ಚಾಲಕ ಮಾಲೀಕರ ಸಂ ವತಿಯಿಂದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ, ಕ್ರೀಡಾಕೂಟ, ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಮುದ್ರಾಡಿ ಸಮುದಾಯ ಭವನದಲ್ಲಿ ಭಾನುವಾರ ನಡೆಯಿತು.
ಮುದ್ರಾಡಿ ಶ್ರೀ ಮಹಾಗಣಪತಿ ಆಟೋ ರಿಕ್ಷಾ ಚಾಲಕ ಮಾಲೀಕರ ಸಂ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು.
ಗೌರವಾಧ್ಯಕ್ಷ ಸನತ್ ಕುಮಾರ್ ಮುದ್ರಾಡಿ, ಕಾನೂನು ಸಲಹೆಗಾರ ಭರತ್ ಕುವಾರ್ ಶೆಟ್ಟಿ, ಹೆಬ್ರಿ ತಾಲೂಕು ಯೂನಿಯನ್ ಆಟೋ ಮಾಲೀಕ, ಚಾಲಕ ಸಂ ಅಧ್ಯಕ್ಷ ಪ್ರಭಾಕರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ಶ್ರೀನಾಥ್ ಶೆಟ್ಟಿಗಾರ್ ಉಪಸ್ಥಿತರಿದ್ದರು.