

ಮಂಡ್ಯ: ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿ ವರ್ಗ, ಸಾಹಿತ್ಯಾಸಕ್ತರು ಹಾಗೂ ಜಿಲ್ಲೆ ಮತ್ತು ರಾಜ್ಯದ ಎಲ್ಲ ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜೀವ್‌ಗಾಂಧಿ ಆಟೋ ಟ್ಯಾಕ್ಸಿ ಚಾಲಕರ ವೇದಿಕೆಯ ಅಧ್ಯಕ್ಷ ಕೃಷ್ಣ.ಟಿ. ತಿಳಿಸಿದರು.
ಸಾಹಿತ್ಯ ಸ್ಮಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ವೇದಿಕೆಯ ವತಿಯಿಂದ 87 ಆಟೋಗಳನ್ನು ಹೂವುಗಳಿಂದ ಅಲಂಕರಿಸಿ, 87 ಸಮ್ಮೇಳನಾಧ್ಯಕ್ಷರ ಭಾವಚಿತ್ರಗಳೊಂದಿಗೆ ಭಾಗವಹಿಸುವ ಮೂಲಕ ಸಮ್ಮೇಳನದ ಯಶಸ್ಸಿಗೆ ಬೆಂಬಲ ವ್ಯಕ್ತಪಡಿಸಿದ್ದೆವು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಮ್ಮೇಳನದಿಂದ ಆಟೋ ಚಾಲಕರ ದುಡಿಮೆಗೂ ಸಹಕಾರವಾಗಲಿದೆ. ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್‌ಗೌಡ, ವಿಧಾನ ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಕಾರ್ಯಾಧ್ಯಕ್ಷ ಸತ್ಯನಾರಾಯಣ, ಖಜಾಂಚಿ ಕೃಷ್ಣ, ಕಾರ್ಯದರ್ಶಿ ಎಂ.ರಾಜು, ಸಂಘಟನಾ ಕಾರ್ಯದರ್ಶಿ ಗುರುಶಂಕರ್, ಬೋರಲಿಂಗ, ರಮೇಶ್‌ಬಾಬು ಇದ್ದರು.