ದೇವನೂರು ಗ್ರಾಪಂ ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ

Oplus_131072
Oplus_131072
Published on

ನಂಜನಗೂಡು: ತಾಲೂಕಿನ ದೇವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅವಿನಾಶ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ದೇವನೂರು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 19 ಸದಸ್ಯರಿದ್ದು, ಮಂಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 19 ಸದಸ್ಯರಲ್ಲಿ 14 ಮಂದಿ ಹಾಜರಾಗಿದ್ದರು. 5 ಸದಸ್ಯರು ಗೈರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾರೂ ನಾಮ ಪತ್ರ ಸಲ್ಲಿಸದ ಕಾರಣ ಅವಿನಾಶ್ ಅವರನ್ನು ನೂತನ ಅಧ್ಯಕ್ಷರಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದರು. ಚುನಾವಣಾಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಬಿಳಿಗೆರೆ ಸಿಡಿಪಿಒ ಮಂಜುಳಾ ಕಾರ್ಯನಿರ್ವಹಿಸಿದರು.

ನೂತನ ಅಧ್ಯಕ್ಷ ಅವಿನಾಶ್ ಮಾತನಾಡಿ, ದೇವನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಅಭಿವೃದ್ಧಿಗೆ ಗಮನಹರಿಸಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ಮೂಲಸೌಕರ್ಯಗಳ ಕಡೆ ಮೊದಲ ಆದ್ಯತೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದೇ ರೀತಿ ಇತರ ಜಾತಿಗಳ ವಿದ್ಯಾರ್ಥಿಗಳಿಗೂ ಪಂಚಾಯಿತಿಯಿಂದ ಸಿಗಬಹುದಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಿಗೆ ಗ್ರಾಮಸ್ಥರು, ಸದಸ್ಯರು ಮತ್ತು ಬಿಜೆಪಿ ಮುಖಂಡರು ಸನ್ಮಾನ ಮಾಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಬಿಜೆಪಿ ಮುಖಂಡರಾದ ಎಸ್.ಮಹದೇವಯ್ಯ, ಸಿ.ಎಂ.ಮಹದೇವಯ್ಯ, ವರಹಳ್ಳಿ ನಾಗೇಂದ್ರ, ಗ್ರಾಪಂ ಸದಸ್ಯರಾದ ಮಂಜು, ಶಶಿಕಲಾ, ಸೌಮ್ಯಾ, ಮಂಜುಳಾ, ಹನುಮಂತ ನಾಯಕ, ರತ್ನಮ್ಮ, ರವಿ, ಪದ್ಮಾ, ಭಾಗ್ಯಾ, ರವಿಕುಮಾರ್, ಮಹದೇವ, ಗ್ರಾಮಸ್ಥರಾದ ಪಟೇಲ್ ರಾಜಪ್ಪ, ಚನ್ನಬಸಪ್ಪ, ಪುಟ್ಟಪ್ಪ, ಶಾಂತಪ್ಪ, ಗುರುಸೋಮಪ್ಪ, ಸುರೇಶ್, ಮಾದಪ್ಪ, ಬಸವಶೆಟ್ಟಿ, ಚಂದ್ರಪ್ಪ ಸೇರಿದಂತೆ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net