ದಲಿತ ದೌರ್ಜನ್ಯ ಪ್ರಕರಣ ತಪ್ಪಿಸಿ-ಶ್ರೀನಿವಾಸ ಹೆಣ್ಣೂರು

Press-Meet.
Published on

ಕಾರವಾರ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು ಇನ್ನೂ ಪರಿಹಾರ ಕಂಡಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀನಿವಾಸ ಹೆಣ್ಣೂರು ಒತ್ತಾಯಿಸಿದರು.

ನಗರದದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಾಕಷ್ಟು ದಲಿತರ ಮೇಲೆ ದೌರ್ಜನ್ಯ, ಅನ್ಯಾಯವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕಳೆದ ಹಲವಾರು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆದರೆ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಸದ್ಯ ಜಿಲ್ಲೆಯ ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ದಲಿತ ಸಮುದಾಯದವರಾಗಿದ್ದರೂ ನ್ಯಾಯ ಲಭಿಸುತ್ತಿಲ್ಲ ಎಂದು ಆರೋಫಿಸಿದರು. ಜಿಲ್ಲೆಯ ನೈಜ ಪರಿಶಿಷ್ಟರಿಗೆ ಸಿಂಧುತ್ವ ಪ್ರಮಾಣ ನೀಡುವಲ್ಲಿಯೂ ವಿಳಂಬವಾಗುತ್ತಿದ್ದು ಈ ಕೃತ್ಯ ಮುಂದುವರೆದರೆ ಜಿಲ್ಲಾಡಳಿತದ ವಿರುದ್ಧ ಉಗ್ರಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಜಿಲ್ಲಾಡಳಿತ ದಲಿತರ ಸಮಸ್ಯೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸರ್ಕಾರಿ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಮೀಸಲಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿಲ್ಲ. ಅಲ್ಲದೇ ಕಾರವಾರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ  ಎಸ್ ಸಿ ಹಾಗೂ ಎಸ್ಟಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಸಂಬಂಧಪಟ್ಟ ಇಲಾಖೆಯವರು ಈ ಬಗ್ಗೆ ತನಿಖೆ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. 

ದಸಂಸ ಜಿಲ್ಲಾ ಸಂಚಾಲಕರಾದ ದೀಪಕ ಕುಡಾಲಕರ ಮಾತನಾಡಿ, ಗೊಂಡ ಸಮುದಾಯದವರು ಸುಳ್ಳು ಜಾತಿ ಪ್ರಮಾಣಪತ್ರ ಮಾಡಿಕೊಂಡು ಕಳೆದ ಸುಮಾರು ವರ್ಷಗಳಿಂದ ಪರಿಶಿಷ್ಟರಿಗೆ ಸಿಗಬೇಕಿದ್ದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ನೈಜ ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಆದರೆ ಜಿಲ್ಲಾಡಳಿತ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.  ಪತ್ರಿಕಾಗೋಷ್ಠಿಯಲ್ಲಿ ರವೀಂದ್ರ ಭಟ್ಕಳ, ತಾಲೂಕು ಸಂಚಾಲಕರು ಸೇರಿದಂತೆ ಇತ್ಯಾದಿ ರಾಜ್ಯ ದಲಿತ ಸಂಘರ್ಷ ಸಮಿತಿಯ  ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net