ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರವಿರಿ

ಬಳ್ಳಾರಿಯ ಡಿಎಚ್‌ಒ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದಲ್ಲಿ ಡಿಎಚ್‌ಒ ಡಾ.ವೈ.ರಮೇಶಬಾಬು ಮಾತನಾಡಿದರು. ವೈದ್ಯಾಧಿಕಾರಿಗಳಾದ ಡಾ.ಇಂದ್ರಾಣಿ, ಡಾ.ಜಬೀನ್ ತಾಜ್, ಡಾ.ಶ್ರಾವಣಿ, ಪ್ರಮುಖರಾದ ರಾಘವೇಂದ್ರ, ಗೋವಿಂದಪ್ಪ, ವಿರೂಪಾಕ್ಷಿ, ಶಿವಕುಮಾರ, ಶರತ್ ಬಾಬು ಇತರರಿದ್ದರು.

Published on

ಬಳ್ಳಾರಿ: ಹಿರಿಯರು ಹಾಗೂ ಯುವಕರು ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರವಿರಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶ್ ಬಾಬು ಹೇಳಿದರು.

ಇದನ್ನೂ ಓದಿ:ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ

ನಗರದ ಡಿಎಚ್‌ಒ ಕಚೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡ್ಡಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ತಂಬಾಕಿನಲ್ಲಿ 7000 ರಾಸಾಯನಿಕ ಅಂಶಗಳಿದ್ದು, ತಂಬಾಕಿನಿಂದ ತಯಾರಾದ ಪದಾರ್ಥಗಳನ್ನು ಸೇವಿಸುವುದರಿಂದ ಕಿಡ್ನಿಗಳ ವೈಫಲ್ಯ, ನರಗಳ ದೌರ್ಬಲ್ಯ, ಕ್ಯಾನ್ಸರ್‌ನಂಥ ಮಾರಾಣಾಂತಿಕ ಖಾಯಿಲೆಗಳು ಉದ್ಭವಿಸುತ್ತವೆ. ತಂಬಾಕು ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಕೋಶದ ಜತೆ ಅನೇಕ ಜಾಗೃತಿ, ತರಬೇತಿ, ತಂಬಾಕು ಕೋಟ್ಪಾ ಕಾರ್ಯಾಚರಣೆ ಕೈಗೊಂಡು ತಂಬಾಕು ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ.ಮರಿಯಂಬಿ ಮಾತನಾಡಿ, ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಿ ಎಂದು ಕರೆ ನೀಡಿದರು. ನಂತರ ಟ್ರಾಮ್ ಕೇರ್ ಸೆಂಟರ್‌ನಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net