

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಹಾಗೂ ಭೂದಾಖಲೆಗಳ ಉಪನಿರ್ದೇಶಕರಾಗಿದ್ದ ಬಿ.ಆರ್.ಹನುಮೇಗೌಡ ಅವರು 2023ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅತ್ಯುನ್ನತ ಸೇವೆ ಮಾಡಿದ ಆಧಾರದ ಮೇಳೆ ರಾಜ್ಯ ಸರ್ಕಾರದ ನೌಕರರಿಗೆ ಕೊಡಮಾಡುವ ಪ್ರಶಸ್ತಿ ಇದಾಗಿದೆ. 50 ಸಾವಿರ ನಗದು, ಪ್ರಶಸ್ತಿ ಪತ್ರದೊಂದಿಗೆ ಗೌರವ ಸಲ್ಲಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.