

ಮಡಿಕೇರಿ:
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಮೂಲಕ ನೀಡುವ ರಾಜ್ಯ ಮಟ್ಟದ ಹೆಚ್. ಎನ್. ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಜಿ. ರಾಜೇಂದ್ರ ಮತ್ತು ಮಹಿಳಾ ಸಾಧಕರಿಗೆ ನೀಡಲಾಗುವ ರಾಜ್ಯಮಟ್ಟದ ಚೈತನ್ಯಶ್ರೀ ಪ್ರಶಸ್ತಿಯನ್ನು ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.
ಬೆಂಗಳೂರಿನ ಸಮೀಪದ ಬಾಗಲೂರು ವಿ ಜೆ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪರಿಷತ್ 4ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಇಸ್ರೋ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಮಾರ್ಗದರ್ಶಕÀ ಡಾ. ಎ. ಎಸ್. ಕಿರಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಈ ಇಬ್ಬರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಎಚ್‌ಎನ್ ಪ್ರಶಸ್ತಿ ಪುರಸ್ಕೃತರಿಗೆ ಮತ್ತು 35 ಮಹಿಳಾ ಸಾಧಕರಿಗೆ ರಾಜ್ಯಮಟ್ಟದ ಚೈತನ್ಯ ಶ್ರೀ ಪ್ರಶಸ್ತಿ ನೀಡಲಾಯಿತು.
ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಮ್ಮೇಳನದ ಸರ್ವಾಧ್ಯಕ್ಷರಾದ ಚಲನಚಿತ್ರ ನಟಿ ಮತ್ತು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್, ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಸೇರಿದಂತೆ ಗಣ್ಯರು ಮತ್ತು ಪ್ರಮುಖರು ಇದ್ದರು.