ಅರೆಭಾಷೆ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ

AWARD
Published on

ಮಡಿಕೇರಿ:

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2022, 23ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಹಾಗೂ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಡಿಕೇರಿಯಲ್ಲಿ ಶುಕ್ರವಾರ ನಡೆಯಿತು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಪ್ರಶಸ್ತಿ ಪ್ರದಾನ ಮಾಡಿದರು.

2022ನೇ ಸಾಲಿಗೆ ಸಂಶೋಧನೆ ಮತ್ತು ಅರೆಭಾಷೆ ಸಾಹಿತ್ಯ ಕ್ಷೇತ್ರದಿಂದ ಡಾ. ಕಾವೇರಿ ಮನೆ ಬೋಜಪ್ಪ, ಅರೆಭಾಷೆ ಮತ್ತು ಸಂಸ್ಕೃತಿ ಸೇವೆಗಾಗಿ ತುಂತಜೆ ವೆಂಕಟೇಶ (ಗಣೇಶ್) ಹಾಗೂ ವೈದ್ಯಕೀಯ ಸೇವೆಗಾಗಿ ಡಾ. ಕೆ.ವಿ. ಚಿದಾನಂದ, 2023ನೇ ಸಾಲಿಗೆ ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಗಾಗಿ ಕುಯಿಂತೋಡು ದಾಮೋದರ, ಅರೆಭಾಷೆ ಸಾಧಕಿ ಮತ್ತು ಕಲಾ ಪೋಷಣೆಗಾಗಿ ಕೂಡಕಂಡಿ ಕಾವೇರಮ್ಮ ಸೋಮಣ್ಣ ಹಾಗೂ ಅಧ್ಯಯನ ಮತ್ತು ಸಂಶೋಧನಾ ಕ್ಷೇತ್ರದಿಂದ ಎ.ಕೆ. ಹಿಮಕರ ಅವರಿಗೆ ಗೌರವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 9 ಫೆಲೋಶಿಫ್ ಅಧ್ಯಯನದ ಸಂಶೋಧನಾ ಪ್ರಬಂಧಗಳು, 8 ಕೃತಿಗಳನ್ನು ಶಿಕ್ಷಣ ತಜ್ಞ ಪ್ರೊ. ಕೆ.ಇ. ರಾಧಾಕೃಷ್ಣ ಬಿಡುಗಡೆ ಮಾಡಿದರು.

ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net