

ಮಡಿಕೇರಿ:
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರತಿಷ್ಠಿತ "ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ"ಗೆ ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು ಪಾತ್ರರಾಗಿದ್ದಾರೆ ಎಂದು ಕಸಾಪ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ತಿಳಿಸಿದ್ದಾರೆ.
ನಾಗೇಶ್ ಕಾಲೂರು ರಚಿಸಿದ "ಶ್ರೀ ಕಾವೇರಿ ದರ್ಶನಂ - ಸಮಗ್ರ ಕಾವೇರಿ ಚರಿತೆ" ಕೃತಿಗೆ ಈ ಪ್ರಶಸ್ತಿ ಬಂದಿದೆ. ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ ಬಿ.ಎಸ್ ಗೋಪಾಲಕೃಷ್ಣ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ದತ್ತಿಯ ಮೊದಲ ಪ್ರಶಸ್ತಿ ಇದಾಗಿದೆ. ಪ್ರಶಸ್ತಿಯ ಆಯ್ಕೆಗಾಗಿ 10 ಕೃತಿಗಳು ಬಂದಿದ್ದವು. ಮುಂದೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಗೇಶ್ ಕಾಲೂರು ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.