ಹೆತ್ತವರ ಋಣ ತೀರಿಸಲು ಸಾಧ್ಯವಿಲ್ಲ: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

Award ceremony Mandya
Published on

ಮಂಡ್ಯ: ಜನ್ಮ ಕೊಟ್ಟ ತಂದೆ, ತಾಯಿ ಋಣವನ್ನ ಎಂದಿಗೂ ತೀರಿಸಲು ಸಾಧ್ಯವಿಲ್ಲ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಆವರಣದಲ್ಲಿ ಕನ್ನಡಸೇನೆ ವತಿಯಿಂದ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ದಿವಂಗತ ಚಿಕ್ಕಣ್ಣ ಅವರ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂದೆ ಮತ್ತು ತಾಯಿ ಹೆಸರನ್ನು ಜೀವಂತವಾಗಿಡಲು ಸಾಮಾಜಿಕ ಸೇವೆ ಮಾಡಬೇಕು. ಪಾಲಕರು ಜೀವಂತವಿದ್ದ ಸಂದರ್ಭದಲ್ಲಿ ತುಂಬಾ ಚೆನ್ನಾಗಿ ನೋಡಿಕೊಳ್ಳಬೇಕು. ಕಾಲವಾದರೂ ಅವರ ಹೆಸರನ್ನು ಜೀವಂತವಾಗಿ ಇಡಬೇಕು. ಈ ನಿಟ್ಟಿನಲ್ಲಿ ಕನ್ನಡಸೇನೆ ಮಂಜುನಾಥ್ ತಮ್ಮ ತಂದೆ ಹೆಸರಿನಲ್ಲಿ ಸಾಮಾಜಿಕ ಸೇವೆ ಮಾಡುತ್ತಿರುವುದು ಶ್ಲಾಘನೀಯ. ಇಂತಹ ಕೆಲಸಗಳು ಸಮಾಜದಲ್ಲಿ ಹೆಚ್ಚು ನಡೆಯಬೇಕು ಎಂದು ಹೇಳಿದರು.

ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಜಯಮ್ಮ, ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ರೈತ ಮುಖಂಡ ಮಹೇಂದ್ರ, ರೋಹಿತ, ರಕ್ಷಿತ್, ಮಹಾಂತಪ್ಪ ಇತರರಿದ್ದರು. ಇದೇ ಸಂದರ್ಭದಲ್ಲಿ ರೈತ ಹೋರಾಟಗಾರ ಶಿವಳ್ಳಿ ಚಂದ್ರಶೇಖರ್ ಅವರಿಗೆ ಹಿಟ್ಟನಹಳ್ಳಿಕೊಪ್ಪಲು ಚಿಕ್ಕಣ್ಣ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net