

ಮಂಡ್ಯ: ಡಾ.ಜಿ.ಮಾದೇಗೌಡರು ಕಳೆದ 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ನಾಮಕರಣ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಡಾ.ಜಿ.ಮಾದೇಗೌಡ ಪ್ರತಿಷ್ಠಾನವು ಹಮ್ಮಿಕೊಂಡಿದ್ದ 23ನೇ ವರ್ಷದ ರಾಜ್ಯಮಟ್ಟದ ಜಿ. ಮಾದೇಗೌಡ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ವೇದಿಕೆಯಲ್ಲಿದ್ದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಎನ್. ಚಲುವರಾಯಸ್ವಾಮಿ ಅವರು ಈ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಹೆಸರನ್ನು ಇಡುವ ಬಗ್ಗೆ ಒಲವು ತೋರಿದರು.