23ರಂದು ಪ್ರಶಸ್ತಿ ಪ್ರದಾನ ಸಮಾರಂಭ

Award ceremony on 23rd
Award ceremony on 23rd
Published on

ಜಯಪುರ : ನಗರದ ಆಶ್ರಮ ರಸ್ತೆಯಲ್ಲಿರುವ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಅ. 23 ರಂದು ಬೆಳಗ್ಗೆ 10.30 ಕ್ಕೆ ರಾಷ್ಟ್ರಮಾತೆ ಕಿತ್ತೂರು ರಾಣಿ ಚನ್ನಮ್ಮನವರ 200ನೇ ವಿಜಯೋತ್ಸವದ ಹಿನ್ನೆಲೆ ಶಾಸಕರಿಗೆ ಹಾಗೂ ವಿವಿಧ ೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಉತ್ನಾಳದ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ, ಅಖಿಲ ಕರ್ನಾಟಕ ಪಂಚಮಸಾಲಿ ಪರಿಷತ್​ ಮತ್ತು ಅಖಿಲ ಭಾರತಿಯ ಪಂಚಮಸಾಲಿ ಪರಿಷತ್​ ಸೇರಿ ವಿವಿಧ ಸಂ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಬಾಗೇವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net