

ಮಂಡ್ಯ: ಸಿ.ಗೌರಮ್ಮ ಚಿಕ್ಕಣ್ಣ ಸಮಾಜಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಅ.29ರಂದು ಬೆಳಗ್ಗೆ 11 ಗಂಟೆಗೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಹೇಳಿದರು.
ಈ ಬಾರಿ ಲಂಕೇಶ್ ಪತ್ರಿಕೆಯ ‘ಕಟ್ಟೆಪುರಾಣ’ ಖ್ಯಾತಿಯ ಅಂಕಣಕಾರ ಬಿ.ಚಂದ್ರೇಗೌಡ ಹಾಗೂ ವಿಕಸನ ಸಂಸ್ಥೆಯ ತರಬೇತಿ ಸಂಯೋಜಕಿ ಕೆ.ಭಾಗ್ಯ ಮಂಗಲ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ 15 ಸಾವಿರ ರೂ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ವಹಿಸಲಿದ್ದು, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು ಅಭಿನಂದನಾ ನುಡಿಗಳನ್ನಾಡುವರು ಎಂದರು.
ಕರ್ನಾಟಕ ಸಂಘದ ಕಾರ್ಯದರ್ಶಿ ಎಸ್.ಡಿ.ಸೋಮಶೇಖರ್ ಹಾಜರಿದ್ದರು.