ರಾಜಪ್ಪ, ಟಿಪ್ಪುಸುಲ್ತಾನ್‌ಗೆ ರಾಜ್ಯಮಟ್ಟದ ಪ್ರಶಸ್ತಿ: ಜು.15ರಂದು ನಗರದಲ್ಲಿ ಪ್ರದಾನ ಸಮಾರಂಭ

Award ceremony press conference Mandya
Published on

ಮಂಡ್ಯ: ಜನತಾ ಶಿಕ್ಷಣ ಟ್ರಸ್ಟ್‌ನಿಂದ ಕೊಡಮಾಡುವ ರಾಜ್ಯಮಟ್ಟದ ಕೆ.ವಿ.ಶಂಕರಗೌಡ ಮತ್ತು ಕೆ.ಎಸ್.ಸಚ್ಚಿದಾನಂದ ರಂಗಭೂಮಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು ಅನುವನಹಳ್ಳಿ ಗ್ರಾಮದವರೂ ಆದ ಬೆಂಗಳೂರು ವಿವಿಯ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಹಾಗೂ ಸಮಾಜಸೇವಾ ಪ್ರಶಸ್ತಿಗೆ ನಾಗಮಂಗಲ ತಾಲೂಕು ಹೊನ್ನಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟಿಪ್ಪು ಸುಲ್ತಾನ್ ಆಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನತಾ ಶಿಕ್ಷಣ ಟ್ರಸ್ಟ್ ನಿರ್ದೇಶಕ ಡಾ.ರಾಮಲಿಂಗಯ್ಯ, ನಿತ್ಯಸಚಿವ ಕೆ.ವಿ.ಶಂಕರಗೌಡರ 109ನೇ ಜನ್ಮದಿನಾಚರಣೆ ಅಂಗವಾಗಿ ಜು.15ರಂದು ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಕೆ.ವಿ.ಶಂಕರಗೌಡ ತರಬೇತಿ ಮತ್ತು ಉದ್ಯೋಗ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇಬ್ಬರಿಗೆ ತಲಾ 25 ಸಾವಿರ ರೂ ನಗದಿನ ಜತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಅಂದು ಬೆಳಗ್ಗೆ 11ಗಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಟ್ರಸ್ಟ್‌ನ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಟ್ರಸ್ಟ್‌ನ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net