

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಇಂದುಮತಿ ಹಾಗೂ ಪಾಟೀಲ ಪುಟ್ಟಪ್ಪನವರ ಪುತ್ರಿಯ ಹೆಸರಿನ ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ ನಿಮಿತ್ತ ಸೆ. 25ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ ಸಮಾರಂಭ ಏರ್ಪಡಿಸಿದೆ.
ಮೈಸೂರಿನ ಸಾಹಿತಿ ಡಾ. ಧರಣಿದೇವಿ ಅರವಿಂದ ಮಾಲಗತ್ತಿ ಅವರಿಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಪ್ರಶಸ್ತಿ ಪ್ರದಾನ ಮಾಡುವರು. ಸಾಹಿತಿ ಡಾ. ವಿನಯಾ ಒಕ್ಕುಂದ ಅಭಿನಂದನಾ ನುಡಿಗಳನ್ನಾಡುವರು. ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಶಂಕರ ಹಲಗತ್ತಿ ತಿಳಿಸಿದ್ದಾರೆ.