

ಕಡಬ: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶತಮಾನೋತ್ಸವ ಪೂರೈಸಿದ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ಶನಿವಾರ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕ ಸುಂದರ ದೇವಸ್ಯ, ಸಿಬ್ಬಂದಿ ವಾಣಿ ಅಬಿಕಾರ, ಭವತ್ ಅಗಳಿ, ವಸಂತಿ, ಪುನೀತ್ ಬಂಡಾಜೆ, ವಿನಯ ಏಳುವೆ, ದುರ್ಗಾಪ್ರಸಾದ್, ಸವಿತಾ, ವೇಣುಗೋಪಾಲ್ ಉಪ್ಪಡ್ಕ ಪ್ರಶಸ್ತಿ ಸ್ವೀಕರಿಸುವ ಸಂದರ್ಭ ಉಪಸ್ಥಿತರಿದ್ದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಶಾಸಕರಾದ ಲಕ್ಷ್ಮಣ ಸವದಿ, ಜಿ.ಟಿ.ದೇವೇಗೌಡ , ಡಾ.ಭರತ್ ಶೆಟ್ಟಿ ವೈ, ಯಶ್‌ಪಾಲ್ ಎ.ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.