

ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗೋವಿಂದರಾಜು ಎಂ. ಕಲ್ಲೂರು ಅವರ 'ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು' ಕಥಾಸಂಕಲನಕ್ಕೆ ಶಿವಮೊಗ್ಗದ ಕರ್ನಾಟಕ ಸಂಘ ಜ್ಞಾನಪೀಠ ಪುರಸ್ಕೃತ ಸಾಹಿತಿ ಪ್ರೊ. ಯು.ಆರ್.ಅನಂತಮೂರ್ತಿ ಅವರ ಹೆಸರಲ್ಲಿ ನೀಡುವ 2023ನೇ ಸಾಲಿನ ಪ್ರತಿಷ್ಠಿತ ಅನಂತಮೂರ್ತಿ ಸಣ್ಣಕಥಾ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ 10,000 ರೂ. ನಗದು ಪುರಸ್ಕಾರ ಮತ್ತು ಸ್ಮರಣಿಕೆ ಒಳಗೊಂಡಿದ್ದು ಸೆಪ್ಟೆಂಬರ್ 22ರಂದು ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಯಲಿದೆ ಎಂದು ಶಿವಮೊಗ್ಗದ ಕರ್ನಾಟಕ ಸಂಘದ ಅಧ್ಯಕ್ಷ ಸುಂದರರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.