ಕರಾಟೆ ಪಂದ್ಯಾವಳಿಯಲ್ಲಿ ಪ್ರಶಸ್ತಿ

29students prises
ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಆಲೂರುಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
Published on

ಶನಿವಾರಸಂತೆ: ತುಮಕೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಕರಾಟೆ ಮತ್ತು ಯೋಗ ಪಂದ್ಯಾವಳಿಯಲ್ಲಿ ಆಲೂರುಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದುಕೊಂಡು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಶಾಲೆಯ ಜನನಿ, ಲಿಖಿತ್, ವೈಷ್ಣವಿ, ದಿಷಿ ಕಾವೇರಮ್ಮ, ಜನಿತ್, ಮಾನವಿ, ರುಶಿತಾ ಮತ್ತು ತರುಣ್ ಅಬೈ ಬಹುಮಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net