

ಕೋಟ: ಸಧೃಡ ಸಮಾಜದ ನಿರ್ಮಾಣದ ಶಿಲ್ಪಿಗಳಂತೆ ಶಿಕ್ಷಕರು ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡು, ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಸುಸಂಸ್ಕೃತ ಬದುಕಿಗೆ ಬೇಕಾಗಿರುವ ಮೌಲ್ಯ ಅಳವಡಿಸಿಕೊಳ್ಳಲು ಶ್ರಮಿಸುತ್ತಿರುವ ಕೆಲಸ ಶ್ಲಾಘನೀಯ ಎಂದು ಬ್ರಹ್ಮಾವರ ವಲಯ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಹೇಳಿದರು.
ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಪಂ, ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ ಆಶ್ರಯದಲ್ಲಿ ಸಾಹಿತ್ಯ ಸಲ್ಲಾಪ, ಕೃತಿ ಬಿಡುಗಡೆ, ನಾಟಕ ಪ್ರದರ್ಶನ, ಡಾ.ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ.ಹಿ.ಪ್ರಾ.ಶಾಲೆ ಸಾಸ್ತಾವು ಪ್ರಭಾರ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಬ್ರಕಟ್ಟೆ ಶಿಕ್ಷಕ ಸುರೇಂದ್ರ ಕೋಟ, ವಿವೇಕ ಪದವಿ ಪೂರ್ವ ಕಾಲೇಜು ಮತ್ತು ಫ್ರೌಡಶಾಲೆ ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ, ಹಿಂದು ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಶಿಕ್ಷಕ ಮಂಜುನಾಥ, ಸ.ಹಿ.ಪ್ರಾ. ಶಾಲೆ ಉಪ್ಪೂರು ಬ್ರಹ್ಮಾವರ ಶಿಕ್ಷಕಿ ಚೆಲುವ ಕುಮಾರಿ, ಸ.ಹಿ.ಪ್ರಾ. ಶಾಲೆ ಹೆಸ್ಕುತ್ತೂರು ಮುಖ್ಯ ಶಿಕ್ಷಕ ಶೇಖರ್, ಸರ್ಕಾರಿ ಫ್ರೌಡಶಾಲೆ ಕುಕ್ಕೆಹಳ್ಳಿ ಶಿಕ್ಷಕಿ ಲಿನೆಟ್ ಮಾರ್ತಾ ಡಿಸೋಜ, ಸ.ಹಿ.ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಶಿಕ್ಷಕಿ ಚಂದ್ರಮತಿ ದೇವಾಡಿಗ, ಸರ್ಕಾರಿ ಫ್ರೌಡಶಾಲೆ ಕಾವಡಿ ಶಿಕ್ಷಕ ಪ್ರಶಾಂತ್ ಜತ್ತನ್, ಸರ್ಕಾರಿ ಸಂಯುಕ್ತ ಫ್ರೌಡಶಾಲೆ(ಪ್ರಾಥಮಿಕ ಭಾಗ)ಮಣೂರು ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಮೋಗವೀರ ಅವರಿಗೆ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ.ಕುಂದರ್ ಪ್ರಶಸ್ತಿ ಪ್ರದಾನ ಮಾಡಿದರು. ಅದ್ವೈತ ಉಪಾಧ್ಯರ ದೇವತರಂಗಿಣಿ ಕೃತಿಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅನಾವರಣಗೊಳಿಸಿದರು. ಕೋಟತಟ್ಟು ಗ್ರಾಪಂ ಅಧ್ಯಕ್ಷ ಕೆ.ಸತೀಶ್ ಕುಂದರ್, ಬ್ರಹ್ಮಾವರ ತಾಲ್ಲೂಕು, ಕ.ಸಾ.ಪ ಅಧ್ಯಕ್ಷ ರಾಮಚಂದ್ರ ಐತಾಳ್, ಸಾಂಸ್ಕೃತಿಕ ಚಿಂತಕ ವಿಘ್ನೇಶ್ ಅಡಿಗ, ಶಿಕ್ಷಕ ಶಿವಪ್ರಸಾದ್ ಶೆಟ್ಟಿಗಾರ್, ಕೋಟತಟ್ಟು ಗ್ರಾಪಂ ಉಪಾಧ್ಯಕ್ಷೆ ಸರಸ್ವತಿ, ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ ಅಧ್ಯಕ್ಷೆ ಲೀಲಾವತಿ ಗಂಗಾಧರ, ಕಾರ್ಯದರ್ಶಿ ಸುಲತಾ ಹೆಗ್ಡೆ ಹಾಗೂ ಪಂಚಾಯಿತಿ ಮತ್ತು ಪ್ರತಿಷ್ಠಾನದ ಸದಸ್ಯರು ಉಪಸ್ಥಿತರಿದ್ದರು. ಪ್ರತಿಷ್ಠಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ನಿರೂಪಿಸಿ, ಕೋಟತಟ್ಟು ಗ್ರಾಪಂ ಪಿಡಿಒ ರವೀಂದ್ರ ರಾವ್ ವಂದಿಸಿದರು.