ಸಂಗೀತ ಸಾಧಕರಿಗೆ ಪ್ರಶಸ್ತಿ ಪ್ರದಾನ

Award
Published on

ಶಿರಸಿ: ನಗರದ ನೆಮ್ಮದಿ ರಂಗಧಾಮದಲ್ಲಿ ರಾಗಮಿತ್ರ ಪ್ರತಿಷ್ಠಾನ ಹಾಗೂ ಮಿತ್ರಾ ಮ್ಯೂಸಿಕಲ್ ಸಂಗೀತ ಸಂಸ್ಥೆಯ 32ನೇ ವಾರ್ಷಿಕ ಸಮ್ಮೇಳನದ ಅಂಗವಾಗಿ ಸಂಗೀತ ಸಾಧಕರಿಗೆ ರಾಗರತ್ನ ಮತ್ತು ಕನಕಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಏರ್ಪಡಿಸಲಾಗಿತ್ತು.

ಹೊನ್ನಾವರ ಕಲಭಾಗದ ಸಂಗೀತ ಸಹೋದರರಾದ ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಗಾಯಕ ಪಂ.ಪರಮೇಶ್ವರ ಹೆಗಡೆ ಬೆಂಗಳೂರು ಮತ್ತು ಖ್ಯಾತ ತಬಲಾ ವಾದಕ ಪಂ. ಗೋಪಾಲಕೃಷ್ಣ ಹೆಗಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕ ರಘುಪತಿ ಭಟ್ ಸುಗಾವಿ ವಹಿಸಿದ್ದರು. ಪತ್ರಕರ್ತ ನಾಗರಾಜ ಮತ್ತಿಗಾರ, ಪ್ರದೀಪ ಯಲ್ಲನಕರ್ ಮಾತನಾಡಿದರು. ಾಗಮಿತ್ರ ಪ್ರತಿಷ್ಠಾನದ ಅಧ್ಯಕ್ಷ ಎಂ.ಎನ್. ಹೆಗಡೆ ಮಾಳೇನಳ್ಳಿ ಉಪಸ್ಥಿತರಿದ್ದರು. ಗಿರಿಧರ ಕಬ್ನಳ್ಳಿ ನಿರೂಪಿಸಿ ಸನ್ಮಾನ ಪತ್ರ ವಾಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net