

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಡಾ. ಶರಣಪ್ಪ ತೋಟಪ್ಪ ನಂದಿಬೇವೂರ ದತ್ತಿ ನಿಮಿತ್ತ ಜು. 3ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಭವನದಲ್ಲಿ ಯುವ ವಿಜ್ಞಾನಿ ಪ್ರಶಸ್ತಿ-2024 ಪ್ರಧಾನ ಸಮಾರಂಭ ಏರ್ಪಡಿಸಲಾಗಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಮತ್ತು ಟೆಕ್ನಾಲಾಜಿ ಕಾಲೇಜಿನ ಪ್ರಾಚಾರ್ಯ ಡಾ. ರಮೇಶ ಚಕ್ರಸಾಲಿ ಅತಿಥಿಗಳಾಗಿ ಆಗಮಿಸುವರು. ಕವಿವಿ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಜೆನ್ನಿರ್ ಪಿಂಟೊ ಯುವ ವಿಜ್ಞಾನಿ ಪ್ರಶಸ್ತಿ ಸ್ವೀಕರಿಸುವರು. ಸಂಘದ ಅಧ್ಯಕ್ಷ ಚಂದ್ರಕಾಂತ ಗುರಪ್ಪ ಬೆಲ್ಲದ ಅಧ್ಯಕ್ಷತೆ ವಹಿಸುವರು. ಡಾ. ಎಸ್.ಟಿ. ನಂದಿಬೇವೂರ, ಅರುಣಾ ನಂದಿಬೇವೂರ ಉಪಸ್ಥಿತರಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.