ಸಾಂಸ್ಕೃತಿಕವಾಗಿ ಮಂಡ್ಯ ಶ್ರೀಮಂತ ಜಿಲ್ಲೆ: ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಬಣ್ಣನೆ

02_10_Mdy_06(Award)
Published on

ಮಂಡ್ಯ: ರಾಜಕೀಯ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಶೈಕ್ಷಣಿಕವಾಗಿ ಮಂಡ್ಯ ಶ್ರೀಮಂತ ಜಿಲ್ಲೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಬಣ್ಣಿಸಿದರು.

ನಗರದ ಕರ್ನಾಟಕ ಸಂಘದ ಕುವೆಂಪು ಬಯಲು ರಂಗಮಂದಿರದಲ್ಲಿ ಕರ್ನಾಟಕ ಸಂಘದಿಂದ ಭಾನುವಾರ ಆಯೋಜಿಸಿದ್ದ ಗಾಂಧಿವಾದಿ ಬಿ.ಎಚ್.ಮಂಗೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ವಾತನಾಡಿದರು.

ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ ಸೇರಿದಂತೆ ಹಲವು ಮಹನಿಯರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮರೆಯಲು ಸಾಧ್ಯವಿಲ್ಲ. ಬಹುತೇಕ ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆರವಾಗಿರುವುದು ಉತ್ತಮ ಕೆಲಸ ಎಂದು ಶ್ಲಾಸಿದರು.

ರೈತರು ಹಗಲು ಇರುಳು ಎನ್ನದೇ ದುಡಿಯುತ್ತಾರೆ. ಬಹುತೇಕ ರೈತರಿಗೆ ಯಾವ ರೀತಿ ಲಾಭದಾಯಕ ಕೃಷಿ ಚಟುವಟಿಕೆ ಬಳಸಿಕೊಳ್ಳಬೇಕು ಎನ್ನುವ ಮಾಹಿತಿ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಸಾವಯವ ಕೃಷಿಕ ಕೋಣಸಾಲೆ ರಮೇಶ್ ಅವರ ಸಾಧನೆ ಅಭಿನಂದನೀಯ. ಇಂತಹ ಪ್ರಗತಿಪರ ರೈತರನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂದು ಶಿಕ್ಷಣ ಕ್ಷೇತ್ರಕ್ಕೆ ಗಾಂಧಿವಾದಿ ಬಿ.ಎಚ್.ಮಂಗೇಗೌಡ ಅವರು ನೀಡಿದ ಕೊಡುಗೆ ಅಪಾರ. ಈಗ ಅವರು ಇಲ್ಲದಿದ್ದರೂ ಸೇವೆಯನ್ನು ಯಾರೂ ಮರೆಯುವಂತಿಲ್ಲ. ಇನ್ನು ಮತ್ತೊಬ್ಬರಿಗೆ ಪ್ರೇರಣೆಯಾಗುವಂತಹ ಉತ್ತಮ ವ್ಯಕ್ತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೃಷಿಯಲ್ಲಿ ರಮೇಶ್ ಹಾಗೂ ಶಿಕ್ಷಣದಲ್ಲಿ ಎನ್.ಹರ್ಷ ವಿನೂತನ ಸಾಧನೆ ಮಾಡುತ್ತಿದ್ದಾರೆ. ಅಧಿಕಾರ ಶಾಶ್ವತವಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಭಿವೃದ್ಧಿ ಕೆಲಸಕ್ಕೆ ಪಕ್ಷಾತೀತವಾಗಿ ಸಹಕರಿಸಲಾಗುವುದು ಎಂದರು.

ಗಾಂಧಿವಾದಿ ಬಿ.ಎಚ್.ಮಂಗೇಗೌಡ ‘ಶಿಕ್ಷಕ ಪ್ರಶಸ್ತಿ’ ಸ್ವೀಕರಿಸಿ ವಾತನಾಡಿದ ಗಣಿತ ಶಿಕ್ಷಕ ಎಸ್.ಹಷರ್, ಈ ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ತಂತ್ರಜ್ಞಾನ ಆಧಾರಿತ ಕಲಿಕೆ ಇದನ್ನು ಮುಖ್ಯವಾಗಿ ಶಾಲಾ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಅಳವಡಿಸಿಕೊಂಡಿದ್ದೇನೆ. ಏಕೆಂದರೆ ಸರ್ಕಾರಿ ಶಾಲೆಯನ್ನು ಮೂಗು ಮುರಿಯುವ ಕಾಲದಲ್ಲಿ ಈ ಸನ್ನಿವೇಶದಲ್ಲಿ ಇದರ ಅನ್ವಯಿಸಬೇಕಿದೆ ಎಂಬುದರ ನಿಟ್ಟಿನಲ್ಲಿ ಪ್ರಯತ್ನ ಪಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಕನ್ನಡ ಶಾಲೆಗಳು ಸಹ ಟಾಪ್‌ನಲ್ಲಿ ಬರಲಿವೆ ಎಂದು ಅಭಿಪ್ರಾಯಪಟ್ಟರು.

ಶಾಸಕರಾದ ಎಂ.ಶ್ರೀನಿವಾಸ್, ಸಿ.ಎಸ್.ಪುಟ್ಟರಾಜು, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಗ್ರಾಮ ವಿದ್ಯಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬೆಕ್ಕಳಲೆ ರು, ಕರ್ನಾಟಕ ಸಂದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಪದಾಧಿಕಾರಿಗಳಾದ ತಗ್ಗಹಳ್ಳಿ ವೆಂಕಟೇಶ್, ಮಂಜಳಾ ಉದಯಶಂಕರ್, ಲೋಕೇಶ್ ಚಂದಗಾಲು ಇತರರಿದ್ದರು.

ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಬಿ.ಎಚ್.ಮಂಗೇಗೌಡ ಕೃಷಿಕ ಪ್ರಶಸ್ತಿಯನ್ನು ಸಾವಯವ ಕೃಷಿಕ ರಮೇಶ್ ಹಾಗೂ ಶಿಕ್ಷಕ ಪ್ರಶಸ್ತಿಯನ್ನು ಎನ್.ಹರ್ಷ ಅವರಿಗೆ ನೀಡಿ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net