ಪ್ರಶಸ್ತಿಗೆ ಡಿ.ಮಾದೇಗೌಡ, ಡಾ.ತಾರಾ ಆಯ್ಕೆ: ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಮಾಹಿತಿ

Tulasi (2)
Published on

ಮಂಡ್ಯ: ಜನದನಿ ಸಾಂಸ್ಕೃತಿಕ ಟ್ರಸ್ಟ್‌ನಿಂದ ಕೊಡಮಾಡುವ ರಾಜ್ಯಮಟ್ಟದ ಇಂಡುವಾಳು ಎಚ್.ಹೊನ್ನಯ್ಯ ಸಮಾಜಸೇವಾ ಪ್ರಶಸ್ತಿಗೆ ಮಾಜಿ ಎಂಎಲ್‌ಸಿ ಡಿ.ಮಾದೇಗೌಡ ಹಾಗೂ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿಗೆ ಶ್ರೀರಂಗಪಟ್ಟಣ ತಾಲೂಕು ಟಿ.ಎಂ.ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟಿ.ಜೆ.ತಾರಾ ಅವರನ್ನು ಆಯ್ಕೆ ಮಾಡಲಾಗಿದೆ.

ಜನದನಿ ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕರ್ನಾಟಕ ಸಂಘದಿಂದ ಡಿ.7ರಂದು ನಗರದ ಕರ್ನಾಟಕ ಸಂಘದ ಆವರಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇಬ್ಬರಿಗೂ ತಲಾ 25 ಸಾವಿರ ರೂ ನಗದಿನ ಜತೆಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಸಂಜೆ 4ಗಂಟೆಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಯಲು ಸಿಂಹ ಕೃತಿಯನ್ನು ಎಂಎಲ್‌ಸಿ ಮಧು ಜಿ.ಮಾದೇಗೌಡ ಬಿಡುಗಡೆ ಮಾಡಲಿದ್ದು, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ ಅಭಿನಂದನಾ ನುಡಿಗಳನ್ನಾಡಲಿದ್ದಾರೆ ಎಂದು ವಿವರಿಸಿದರು.

ಅಂತೆಯೇ ಮಾಜಿ ಎಂಎಲ್‌ಸಿ ಬಿ.ರಾಮಕೃಷ್ಣ, ಸಾಹಿತಿ ಡಾ.ಎಚ್.ಎಸ್.ಮುದ್ದೇಗೌಡ, ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ಸಿದ್ದಪ್ಪ ಭಾಗವಹಿಸಲಿದ್ದಾರೆ. ಇದೇ ವೇಳೆ 2022ನೇ ಸಾಲಿನಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಎಚ್.ಶಾರದಮ್ಮ ಮತ್ತು ಕೆಂಪಯ್ಯ ಹೆಸರಿನಲ್ಲಿ ತಲಾ 5 ಸಾವಿರ ರೂ ನಗದಿನ ಜತೆಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಹೇಳಿದರು.

ಮಾಜಿ ಎಂಎಲ್‌ಸಿ ಎಚ್.ಹೊನ್ನಪ್ಪ, ಮೋಹನ್, ಸೋಮಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net