ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಪ್ರಶಸ್ತಿ, ರಾಜ್ಯಮಟ್ಟದ ಸಪ್ತಾಹದಲ್ಲಿ ಪ್ರದಾನ, ಕ್ಷೇತ್ರದ ಉತ್ತಮ ಸಾಧನೆಗೆ ಗೌರವ

athmashakthi
ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023ನೇ ಸಾಲಿನ ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ ಪ್ರಶಸ್ತಿ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪ್ರಶಸ್ತಿ ಸ್ವೀಕರಿಸಿದರು.ಸಹಕಾರ ಸಚಿವ ಕೆ.ಎನ್.ರಾಜಣ್ಣ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
Published on

ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ 2023ನೇ ಸಾಲಿನ ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ ಪ್ರಶಸ್ತಿಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಪ್ರದಾನ ಮಾಡಲಾಯಿತು.

ರಾಜ್ಯ ಸಹಕಾರ ಮಹಾಮಂಡಳ, ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಶನಿವಾರ ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಹಕಾರ ಸಚಿವ ಕೆ.ಎನ್.ರಾಜಣ್ಣ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ..ಎನ್.ರಾಜೇಂದ್ರ ಕುಮಾರ್ ಉಪಸ್ಥಿತಿಯಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯಶ್‌ಪಾಲ್ ಎ.ಸುವರ್ಣ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಆತ್ಮಶಕ್ತಿ ಸಹಕಾರಿ ಸಂಘ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ ಎಸ್.ಕೊಂಡಾಣ, ರಮಾನಾಥ ಸನಿಲ್, ಗೋಪಾಲ್ ಎಂ, ಬಿ.ಪಿ.ದಿವಾಕರ್, ಉಮಾವತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net