

ಹುಬ್ಬಳ್ಳಿ: ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ಇಲ್ಲಿಯ ಅರವಿಂದ ನಗರದ ಶ್ರೀ ಹುಲಿಗೆಮ್ಮ ದೇವಸ್ಥಾನದ ಸಂಸ್ಥಾಪಕಿ ಮಾತೋಶ್ರೀ ಡಾ. ಹುಲಿಗೆಮ್ಮ ಪೋಸಾ ಅಮ್ಮನವರಿಗೆ ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿ ಲಭಿಸಿದೆ.
ಸಾಲುಮರದ ತಿಮ್ಮಕ್ಕ ಇಂಟರ್‌ನ್ಯಾಷನಲ್ ಫೌಂಡೇಷನ್ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಹತ್ತು ಸಾವಿರ ನಗದು, ಬೆಳ್ಳಿ ಪದಕ, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 14 ಜನರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಸೆ. 26ರಂದು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.