ಕೃಷ್ಣಕುಮಾರ್‌ಗೆ ಪ್ರಶಸ್ತಿ

20240922_170545
Published on


ಶ್ರೀರಂಗಪಟ್ಟಣ : ತಾಲೂಕಿನ ಗಣಂಗೂರು ಗ್ರಾಮದ ಮುಖಂಡ ಕೃಷ್ಣಕುಮಾರ್ ಅವರು 2024 ನೇ ಸಾಲಿನ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಾಲೂಕಿನ ಸಬ್ಬನಕುಪ್ಪೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮತ್ತು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಕುಮಾರ್ ಕುಳುವ ಸಮುದಾಯದ ಜಿಲ್ಲಾಧ್ಯಕ್ಷರಾಗಿ ಸಾಕಷ್ಟು ಸಾಮಾಜಿಕ ಸೇವೆ ಹಾಗೂ ಸಮುದಾಯ ಪ್ರಗತಿ ಕಾರ್ಯಗಳನ್ನು ಸಲ್ಲಿಸಿದ್ದು, ಇದನ್ನು ಗುರುತಿಸಿ ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಶಿವಗಂಗೆಯ ಶ್ರೀ ಜ್ಞಾನನಂದಪುರಿ ಸ್ವಾಮಿಗಳ ನೇತೃತ್ವದಲ್ಲಿ ರಾಜ್ಯ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಧ್ಯಕ್ಷ ಸೈದಪ್ಪ ಗುತ್ತಿಗೆದಾರ್, ಕಲ್ಯಾಣ ಸರ್ಕಾರ ಪ್ರದೇಶ ಅಭಿವೃದ್ಧಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್.ಜಿ.ಕೀರ್ತಿಗಣೇಶ್ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಯಿತು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಉದ್ಯಮಿ ಟಿ.ವಿ.ಬಾಬು, ವಿಧಾನ ಪರಿಷತ್ ಮಾಜಿ ಸದಸ್ಯ ಲಕ್ಷ್ಮೀ ನಾರಯಣ್ ಇತರರು ಈ ವೇಳೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net