ನೆಲ್ಯಾಡಿ ಸಹಕಾರಿ ಸಂಘಕ್ಕೆ ಪ್ರಶಸ್ತಿ

society
Published on

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 5 ವರ್ಷಗಳಿಂದ ಸರ್ವತೋಮುಖ ಪ್ರಗತಿಗಾಗಿ ವಿಶೇಷ ಪ್ರಶಸ್ತಿ ಪಡೆಯುತ್ತಿದ್ದು, ಪ್ರಸ್ತುತ ವರ್ಷ ಶೇ.100 ಸಾಲ ವಸೂಲಾತಿ ಮಾಡಿರುವುದಕ್ಕೆ ಆ.14ರಂದು ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಯಾಕರ ರೈ ಕೆ.ಎಂ.ಉಪಾಧ್ಯಕ್ಷ ಕಮಲಾಕ್ಷ ಗೌಡ, ನಿರ್ದೇಶಕರಾದ ಉಷಾ ಅಂಚನ್, ಪ್ರಶಾಂತ್ ರೈ ಅವರಿಗೆ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ್ ಕುಮಾರ್, ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ನಿರ್ದೇಶಕರಾದ ಶಶಿ ಕುಮಾರ್ ರೈ, ಜಯರಾಮ ರೈ, ದೇವಿ ಪ್ರಸಾದ್ ಶೆಟ್ಟಿ, ಕುಶಾಲಪ್ಪ ಗೌಡ ಪೂವಾಜೆ ಹಾಗೂ ಇತರ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net