

ಮಡಿಕೇರಿ:
ಮಡಿಕೇರಿ ತಾಲೂಕು ಹೊದ್ದೂರು ಮತ್ತು ಹೊಸ್ಕೇರಿ ಗ್ರಾಮ ಪಂಚಾಯತಿ ಪಿಡಿಒ ಎ. ಎ. ಅಬ್ದುಲ್ಲ ಕರ್ನಾಟಕ ಪಂಚಾಯತ್ ಪರಿಷತ್‌ನ ಡಾ. ಚಿಕ್ಕಕೋಮಾರಿ ಗೌಡ ಅತ್ಯುತ್ತಮ ಪಿಡಿಒ ಪ್ರಶಸ್ತಿಗೆ ಭಾಜನರಾಗಿದಾರೆ. ಬೆಂಗಳೂರಿನ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ವತಿಯಿಂದ ಕರ್ನಾಟಕ ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್ ಜನ್ಮ ದಿನದ ಅಂಗವಾಗಿ ನಜೀರ್ ಸಾಬರ ಹುಟ್ಟೂರು ಗುಂಡ್ಲುಪೇಟೆಯಲ್ಲಿ ಇತ್ತೀಚೆಗೆ ನಡೆದ ಪಂಚಾಯತ್ ಸಬಲೀಕರಣ ದಿನಾಚರಣೆ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಮಾಜಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಡಿ.ಆರ್. ಪಾಟೀಲ್, ವೆಂಕಟರಾವ್ ವೈ ಘೋರ್ಪಡೆ, ಕಾಡ ಶೆಟ್ಟಹಳ್ಳಿ ಸತೀಶ್, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಮತ್ತಿತರರು ಈ ಸಂದರ್ಭ ಇದ್ದರು.
ಅಬ್ದುಲ್ಲ ಅವರು ಈ ಹಿಂದೆ 2010-2019 ರ ವರೆಗೆ ವಿರಾಜಪೇಟೆ ತಾಲೂಕು ಮಾಲ್ದಾರೆ ,ಪಾಲಿಬೆಟ್ಟ ಗ್ರಾಮ ಪಂಚಾಯತಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು 2022ರ ರಾಜ್ಯ ಸÀರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರೂ ಹೌದು. ಅಬುಲ್ಲ ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ಅಲಿಕುಟ್ಟಿ ಹಾಜಿ ಮತ್ತು ಫಾತಿಮಾ ದಂಪತಿಯ ಪುತ್ರ.