

ಮೈಸೂರು: ಕರ್ನಾಟಕ ಪ್ರಕಾಶಕರ ಸಂಘವು ಕೊಡಮಾಡುತ್ತಿರುವ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ರೂಪಾ ಮತ್ತೀಕೆರೆ (ನಂಜನಗೂಡು ತಿರುಮಲಾಂಬ ಪ್ರಶಸ್ತಿ) ಮತ್ತು ಮೈಸೂರಿನ ಚಿಂತನ ಚಿತ್ತಾರ ಪ್ರಕಾಶನದ ನಿಂಗರಾಜ್ ಚಿತ್ತಣ್ಣವರ್(ಶ್ರೀ ಗೋಪಾಲ ಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿ) ಆಯ್ಕೆಯಾಗಿದ್ದಾರೆ.
ಕನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ ಅವರ ಅಧ್ಯಕ್ಷತೆ ಶುಕ್ರವಾರ ಅಯೋಜಿಸಿದ್ದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಶ್ವ ಪುಸ್ತಕ ದಿನ ಅಂಗವಾಗಿ ಏ.23 ರಂದು ಬೆಂಗಳೂರಿನ ಬಿಎಂಶ್ರೀ ಪ್ರತಿಷ್ಠಾನದ ಎಂವಿಸಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ಎಂ.ಎಸ್.ಆಶಾದೇವಿ, ಭೈರಮಂಗಲ ರಾಮೇಗೌಡ, ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.