ಒಳಚರಂಡಿ ಸಹಾಯಕರ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ

43
Published on

ಮೈಸೂರು: ಮೈಸೂರು ನಗರಪಾಲಿಕೆಯ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಪ್ರಥಮ ಬಾರಿಗೆ ಒಳಚರಂಡಿ ಸಹಾಯಕರ ಪ್ರತಿಭಾನ್ವಿತ 18 ಮಕ್ಕಳನ್ನು ಪುರಸ್ಕರಿಸಲಾಯಿತು.
ನಗರಪಾಲಿಕೆ ಆಯುಕ್ತೆ ಡಾ.ಎನ್.ಎನ್.ಮಧು ಪಾಟೀಲ್ ಅವರು ವಿದ್ಯಾರ್ಥಿಗಳನ್ನು ಪುರಸ್ಕರಿಸಿ, ಪ್ರತಿಭಾನ್ವಿತ ಅರ್ಹ ಮಕ್ಕಳಿಗೆ ನಗರಪಾಲಿಕೆಯಿಂದ ಧನ ಸಹಾಯ ಹಾಗೂ ಲ್ಯಾಪ್‌ಟಾಪ್ ಸೇರಿದಂತೆ ಇನ್ನಿತರ ಅಗತ್ಯ ಪರಿಕರಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಧೀಕ್ಷಕ ಇಂಜಿನಿಯರ್ ಸಿಂಧು, ಕಾರ್ಯಪಾಲಕ ಇಂಜಿನಿಯರ್‌ಗಳಾದ ಅಶ್ವಿನ್, ನಾಗರಾಜು, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ಸೋಮಶೇಖರ್, ನಾಗರಾಜೇಗೌಡ. ರವಿಕುಮಾರ್. ವಾಣಿವಿಲಾಸ ನೀರು ಸರಬರಾಜು ಮತ್ತು ಒಳಚರಂಡಿ ಅಧಿಕಾರಿಗಳು, ನೌಕರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net