

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪಟ್ಟಣ ಸಹಕಾರ ಬ್ಯಾಂಕುಗಳ ಕ್ಷೇತ್ರದ ಉತ್ತಮ ಬ್ಯಾಂಕುಗಳಿಗೆ ಕೊಡಮಾಡುವ 2022-23ನೇ ಸಾಲಿನ ಸಾಧನಾ ಪ್ರಶಸ್ತಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಗೆ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.
ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಸ್.ಆರ್.ಹರೀಶ್ ಆಚಾರ್ಯ, ಉಪಾಧ್ಯಕ್ಷ ಡಿ.ಭಾಸ್ಕರ ಆಚಾರ್ಯ, ನಿರ್ದೇಶಕರಾದ ಎಸ್.ಜಯಶ್ರೀ ವಿ.ಆಚಾರ್ಯ, ಹರಿಪ್ರಸಾದ್ ಮತ್ತು ಭರತ್ ಲೋಕೇಶ್ ಆಚಾರ್, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಪುಂಜಾಲ್‌ಕಟ್ಟೆ ಉಪಸ್ಥಿತರಿದ್ದರು.