

ಚಿತ್ರದುರ್ಗ: ಉತ್ತಮ ಸೇವೆಗಾಗಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಸಿ.ಕೆ.ಸಂಧ್ಯಾ ಹಾಗೂ ಮಂಗಳೂರು ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ, ಹೊಳಲ್ಕೆರೆಯ ಕೆ.ಪಿ.ಮಹಮ್ಮದ್ ಜುಲ್ಫಿಕರ್ ಅವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಚಿನ್ನದ ಪದಕವನ್ನು ಶುಕ್ರವಾರ ಪ್ರದಾನ ಮಾಡಿದರು.
ಬೆಂಗಳೂರಿನ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿ ಪದಕ ಪ್ರದಾನ ಹಾಗೂ ಅಗ್ನಿಶಾಮಕ ಠಾಣಾಧಿಕಾರಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಸಂಧ್ಯಾ, ಜುಲ್ಫಿಕರ್ ಅವರು ಪದಕ ಸ್ವೀಕರಿಸಿದರು.