ಹಿಂದೂ ಮಲಯಾಳಿ ಸಮಾಜದಿಂದ ಸಾಧಕರಿಗೆ ಸನ್ಮಾನ

Awarded to achievers by Hindu Malayali society
Published on

ಮಡಿಕೇರಿ:

ಹಿಂದೂ ಮಲಯಾಳಿ ಸಮಾಜ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ (ಜು.೭) ಮಡಿಕೇರಿಯಲ್ಲಿ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ ೧೦.೩೦ಕ್ಕೆ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸುವರು. ಸಮಾಜದ ಅಧ್ಯಕ್ಷ ಎಂ.ವಿ. ವಿಜಯನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಸಾಧಕರನ್ನು ಸನ್ಮಾನಿಸಲಿರುವರು. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಸಮಾಜದ ಸ್ಥಾಪಕ ಅಧ್ಯಕ್ಷ ಕೆ.ಎಸ್. ರಮೇಶ್ ಸೇರಿದಂತೆ ಹಲವರು ಭಾಗವಹಿಸುವರು ಎಂದು ಸಮಾಜದ ಅಧ್ಯಕ್ಷ ಎಂ.ವಿ. ವಿಜಯನ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರನ್ನು ಕೂಡ ಸನ್ಮಾನಿಸಲಾಗುವುದು. ಜಿಲ್ಲೆಯಲ್ಲಿ ೯ ಕಡೆ ಹಿಂದೂ ಮಲಯಾಳಿ ಸಮಾಜಗಳಿದ್ದು, ಪ್ರತಿ ಸಮಾಜಗಳಿಂದಲೂ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಕಳೆದ ೨ ವರ್ಷಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಲಾ ಇಬ್ಬರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ೪೦ ಸಾಧಕರನ್ನು ಸನ್ಮಾನಿಸಲಾಗುವುದು.
ಮಧ್ಯಾಹ್ನ ನಂತರ ಹಿಂದೂ ಮಲಯಾಳಿ ಸಮಾಜ ಕೊಡಗು ಜಿಲ್ಲಾ ಸಮಿತಿಯ ಮಹಾಸಭೆ ಏರ್ಪಡಿಸಲಾಗಿದ್ದು, ಈ ಸಂದರ್ಭ ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಖಜಾಂಚಿ ಕೆ. ಬಾಬು, ಉಪಾಧ್ಯಕ್ಷ ಟಿ.ಕೆ. ಸುಧೀರ್, ಮುಖ್ಯ ಸಲಹೆಗಾರ ಸಲಹೆಗಾರ ಟಿ. ಆರ್. ವಾಸುದೇವ್, ಸ್ಥಾಪಕ ಅಧ್ಯಕ್ಷ ಕೆ.ಎಸ್. ರಮೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net