

ಗಂಗೊಳ್ಳಿ: ಶಾಂತಿವನ ಟ್ರಸ್ಟ್‌ನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ, ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಹೊರತಂದ ಜ್ಞಾನ ವರ್ಷಿಣಿ ಮತ್ತು ಜ್ಞಾನ ದರ್ಶಿನಿ ಪುಸ್ತಕಗಳ ಕುರಿತು ಜರುಗಿದ ತಾಲೂಕುಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಪ್ರೌಢಶಾಲಾ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಪೂರ್ವಿ ಜೆ.ಎಂ. ಪ್ರಥಮ ಸ್ಥಾನ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ರಿಷಿಕಾ ದೇವಾಡಿಗ ದ್ವಿತೀಯ ಸ್ಥಾನ, ಚಿತ್ರಕಲಾ ವಿಭಾಗದಲ್ಲಿ ಅನನ್ಯಾ ವಿ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಪ್ರಾಂಶುಪಾಲ, ಶ್ರೀ ಸಿದ್ಧಿ ಶೈಕ್ಷ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಶರಣಕುಮಾರ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.