ನಾಳೆ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

mm 17-6
Published on

ವಿಜಯಪುರ: ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಪತ್ರಿಕಾ ದಿನಾಚರಣೆ ಮತ್ತು ವಿವಿಧ ೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜು. 19 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂದ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ ಹೇಳಿದರು.

ನಗರದ ಜಿಪಂ ರಸ್ತೆಯ ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ನಡೆಯುವ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ಕೆಯುಡಬ್ಲುಜೆ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ. ಲೋಕೇಶ, ಉಪಾಧ್ಯಕ್ಷ ಪುಂಡಲೀಕ ಬಾಳೊಜಿ ಹಾಗೂ ಭವಾನಿಸಿಂಗ ಠಾಕೂರ ಭಾಗವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಗೋಪಾಲ ನಾಯಕ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿವಿಧ ೇತ್ರಗಳಲ್ಲಿ ಸಾಧನೆಗೈದ ಎಸ್ಪಿ ಲಕ್ಷ$್ಮಣ ನಿಂಬರಗಿ, ಜಿಪಂ ಸಿಇಒ ರಿಷಿ ಆನಂದ ಹಾಗೂ ಡಿವೈಎಸ್ಪಿ ಬಸವರಾಜ ಯಲಿಗಾರ ಅವರಿಗೆ ವಿಶೇಷ ಸನ್ಮಾನ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​ ವಿತರಣೆಗೆ ಸಹಕರಿಸಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್​ ಮತ್ತು ಸಂದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ವಿಶೇಷ ಸನ್ಮಾನ ನಡೆಯಲಿದೆ ಎಂದು ಅವರು ತಿಳಿಸಿದರು.

ಸಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಷ್ಟ್ರೀಯ ಮಂಡಳಿಯ ಮಹೇಶ ಶೆಟಗಾರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಿ.ಬಿ. ವಡವಡಗಿ, ನಾಮ ನಿರ್ದೇಶನ ಸದಸ್ಯ ಕೌಶಲ್ಯ ಪನಾಳಕರ, ಕೆ.ಕೆ. ಕುಲಕರ್ಣಿ, ಖಜಾಂಜಿ ರಾಹುಲ್​ ಆಪ್ಟೆ, ಅಶೋಕ ಯಡಹಳ್ಳಿ, ಗುರು ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ, ಇರ್ಫಾನ ಶೇಖ, ಶಶಿಕಾಂತ ಮೆಂಡೆಗಾರ, ಶರಣು ಮಸಳಿ, ಗುರು ಲೋಕುರಿ, ಮಲ್ಲು ಕೆಂಭಾವಿ, ನಾಗೇಶ ನಾಗೂರ, ಮಹ್ಮದ ಸಮೀರ ಇನಾಮದಾರ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪುರಸತ: ಪತ್ರಕರ್ತರಾದ ಸರೋಜಿನಿ ಕುಲಕರ್ಣಿ,ಪರಶುರಾಮ ಶಿವಶರಣ, ನವೀದಅಂಜುಮ್​ ಮಮದಾಪುರ, ವಿನೋದ ಸಾರವಾಡ , ಶರಣಬಸಪ್ಪ ಮಸಳಿ, ಅಪ್ಪು ಚಿನಗುಂಡಿ, ಗುರಪ್ಪ ಲೋಕುರಿ, ಮಲ್ಲಿಕಾರ್ಜುನ ಅಲ್ಲಾಪುರ , ಮಂಜು ಕಲಾಲ, ಮಲ್ಲಿಕಾರ್ಜುನ ಕುಬಕಡ್ಡಿ, ಬಸಲಿಂಗಯ್ಯ ಮಠಪತಿ, ಬೀರಪ್ಪ ಹೊಸೂರ, ಗುರು ಹಿರೇಮಠ, ಲಕ್ಷಿ$್ಮ ಹಿರೇಮಠ , ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಶಿವಯ್ಯ ಮಠಪತಿ, ನೂರ್​ನಬಿ ನದಾಫ್​, ಶಿವಾನಂದ ಸಜ್ಜನ ಅವರಿಗೆ ಸನ್ಮಾನ ಹಾಗೂ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿಯ 17 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ವಿಜಯಪುರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಪ್ರಕಾಶ ಬೆಣ್ಣೂರ ಮಾತನಾಡಿದರು. ಮೋಹನ ಕುಲಕರ್ಣಿ, ಇಂದುಶೇಖರ ಮಣೂರ, ಮಹೇಶ ಶೆಟಗಾರ ಮತ್ತಿತರರಿದ್ದಾರೆ.

**

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net