ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಅಗತ್ಯ

12blrp2
Published on

ಬೇಲೂರು: ವಿಶ್ವಾದ್ಯಂತ ಮಧ್ಯ ವಯಸ್ಸಿನ ಮಹಿಳೆಯರು ಹೆಚ್ಚು ಸ್ತನ ಕ್ಯಾನ್ಸರ್‌ಗೆ ಬಲಿಯಾಗುತ್ತಿರುವುದು ವಿಷಾದದ ಸಂಗತಿ. ಈ ಬಗ್ಗೆ ಮಹಿಳೆಯರು ಹೆಚ್ಚು ಜಾಗೃತರಾಗಬೇಕಿದೆ ಎಂದು ತಾಲೂಕಿನ ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಮತಾ ಹೇಳಿದರು.

ಬೇಲೂರು ಪಟ್ಟಣದ ವೈಷ್ಣವ ಗೋಷ್ಠಿ ಸಭಾಂಗಣದಲ್ಲಿ ವಿಪ್ರ ಮಹಿಳಾ ಒಕ್ಕೂಟದಿಂದ ಸೋಮವಾರ ಸಂಜೆ ಆಯೋಜಿಸಿದ್ದ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ತಮ್ಮ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಜಾಗೃತಿ ವಹಿಸುವ ಜತೆಗೆ ತಮ್ಮ ಆರೋಗ್ಯದ ಕಡೆಯೂ ಗಮನ ಹರಿಸಬೇಕು. ಆದರೆ ಅವರು ತಮ್ಮ ಆರೋಗ್ಯವನ್ನು ಲೆಕ್ಕಿಸದ ಕಾರಣ ಹಲವಾರು ಕಾಯಿಲೆಗಳಿಗೆ ತುತ್ತಾಗುತಿದ್ದಾರೆ. ಹಾಗೆಯೇ ವೈಯಕ್ತಿಕ ಸ್ವಚ್ಛತೆ ಕಡೆಗೆ ಗಮನ ನೀಡಬೇಕು. ರಸಾಯನಿಕಯುಕ್ತ ಆಹಾರ ಪದಾರ್ಥ ಸೇವನೆಯಿಂದ ದೂರ ಇರಬೇಕು ಎಂದು ಸಲಹೆ ನೀಡಿದರು.

ದೇಶ ಭಕ್ತರ ಬಳಗದ ಅಧ್ಯಕ್ಷ ಹಾಗೂ ವೈದ್ಯ ಡಾ.ಸಂತೋಷ್ ಮಾತನಾಡಿದರು. ವಿಪ್ರ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀವಿದ್ಯಾ, ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ನಿರ್ದೇಶಕ ನಾರಾಯಣರಾವ್, ವಿಪ್ರ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.

ಚಿತ್ರ:12(ಬಿಎಲ್‌ಆರ್)2- ವಿಪ್ರ ಮಹಿಳಾ ಒಕ್ಕೂಟದಿಂದ ಪಟ್ಟಣದ ವೈಷ್ಣವ ಗೋಷ್ಠಿ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಮಮತಾ ಉದ್ಘಾಟಿಸಿದರು. ಡಾ.ಸಂತೋಷ್, ಶ್ರೀವಿದ್ಯಾ, ನಾರಾಯಣರಾವ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net