

ಕುಂದಾಪುರ: ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾದ ಬಳಿಕ ಸ್ವಚ್ಛತೆ ಬಗ್ಗೆ ಜನರ ಮನಸ್ಸಿನಲ್ಲಿ ಪರಿವರ್ತನೆಯಾಗಿದೆ. ದೇಶದೆಲ್ಲೆಡೆ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡುತ್ತಿದೆ. ಸ್ವಚ್ಛ ಭಾರತ್ ಕಾರ್ಯಕ್ರಮ, ಯುವಕ ಮಂಡಲ, ಸಂಜೀವಿನಿ ಸಂ, ಸಂಟನೆ ಮೂಲಕ ಆಗಾಗ್ಗೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಆಲೂರು ಗ್ರಾಮ ಪಂಚಾಯಿತಿ ವತಿಯಿಂದ ಆಲೂರಿನ ಮೀನು ವಾರುಕಟ್ಟೆ ಬಳಿ ನಿರ್ಮಿಸಲಾದ ಸಾರ್ವಜನಿಕ ಶೌಚಗೃಹ, ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ವಾತನಾಡಿದರು.
ಬೈಂದೂರು ಬೀಚ್ನಲ್ಲಿ ಪ್ರಾರಂಭಿಸಲಾದ ಕ್ಲೀನ್ ಕಿನಾರಾ ಕಾರ್ಯಕ್ರಮ 170 ವಾರಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ. ಸ್ವಚ್ಛತೆಗೆ ಜನರು ಹೆಚ್ಚಿನ ಗಮನ ನೀಡಬೇಕು ಎಂದರು.
ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಕರುಣಾಕರ ಶೆಟ್ಟಿ, ಶಿವರಾಮ ಶೆಟ್ಟಿ, ಬಾಬು ಶೆಟ್ಟಿ, ಗ್ರಾಪಂ ಉಪಾಧ್ಯಕ್ಷೆ ಸಿಂಗಾರಿ, ಸದಸ್ಯರಾದ ರವಿ ಶೆಟ್ಟಿ, ಪ್ರಸನ್ನ ಶೆಟ್ಟಿ, ಸ್ಥಳೀಯ ಮುಖಂಡರಾದ ಅಪ್ಪು ಕುಲಾಲ್, ಪ್ರಶಾಂತ ಶೆಟ್ಟಿ, ದಿನೇಶ ಆಚಾರ್ಯ, ವಾಸುದೇವ ಶ್ಯಾನುಭಾಗ್, ಗ್ರಾಪಂ ಸದಸ್ಯರು, ವಿವಿಧ ಸಂ-ಸಂಸ್ಥೆ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಮೊದಲಾದವರು ಉಪಸ್ಥಿತರಿದ್ದರು. ಪಿಒ ರೂಪಾ ಗೋಪಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.