

ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ಸಮುದಾಯ ಬಾನುಲಿ ಕೇಂದ್ರದಲ್ಲಿ ಗುರುವಾರ ರಾಷ್ಟ್ರೀಯ ಡೆಂಘೆ ದಿನದ ಅಂಗವಾಗಿ ನೇರ ಫೋನ್-ಇನ್ ಪ್ರಸಾರ ಕಾರ್ಯಕ್ರಮ ನಡೆಯಿತು.
ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನೇರ ಫೋನ್-ಇನ್ ಪ್ರಸಾರ ಕಾರ್ಯಕ್ರಮದಲ್ಲಿ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞವೈದ್ಯ ಡಾ. ಜಯಪ್ರಕಾಶ ಅಪ್ಪಾಜಿಗೋಳ ಅವರು ಡೆಂಘೆ ಕುರಿತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ಸಮುದಾಯ ಬಾನುಲಿ ಕೇಂದ್ರವು ರಾಷ್ಟ್ರೀಯ ಡೆಂಘೆ ದಿನದ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಿತು. ಡೆಂಘೆ ರೋಗದ ಲಕ್ಷಣಗಳು, ವಿಧಗಳು, ಹರಡುವ ವಿಧಾನ, ತಡೆಗಟ್ಟುವ ಕ್ರಮಗಳು ಮತ್ತು ಚಿಕಿತ್ಸೆ ಕುರಿತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕ ಮನಿಷ ಪಿ.ಎಸ್., ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.