ನಿಯಮಿತ ಆರೋಗ್ಯ ತಪಾಸಣೆ ಅಗತ್ಯ: ಪ್ರಸೂತಿ ತಜ್ಞೆ ಡಾ.ಲಾವಣ್ಯಾ ಕಿರಣ್ ಕಿವಿಮಾತು

Awareness about Womens Health mandya
Published on

ಮಂಡ್ಯ: ಹೆಣ್ಣು ಜೀವನದಲ್ಲಿ ಪ್ರತಿ ಹಂತದಲ್ಲಿಯೂ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಕಾವೇರಿ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ.ಲಾವಣ್ಯಾ ಕಿರಣ್ ಸಲಹೆ ನೀಡಿದರು.

ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ವಿಭಾಗದಿಂದ ಆಯೋಜಿಸಿದ್ದ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಿಶೋರಾವಸ್ಥೆಯಿಂದ ಮುಟ್ಟು ನಿಲ್ಲುವ ವಯಸ್ಸಿನವರೆಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಜತೆಗೆ ಮುಂಜಾಗ್ರತೆ ಇರಬೇಕು. ಋತುಸ್ರಾವದ ಸಮಯದಲ್ಲಿ ಆರೋಗ್ಯ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಜೀವನಶೈಲಿ ಬದಲಾವಣೆಯ ಬಗ್ಗೆ ಎಚ್ಚರಿಕೆ ಇರಬೇಕು ಎಂದು ಕಿವಿಮಾತು ಹೇಳಿದರು.

ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ನಂಜುಂಡಸ್ವಾಮಿ, ಉಪ ಪ್ರಾಂಶುಪಾಲ ಡಾ.ಎಸ್.ವಿನಯ್, ಮಹಿಳಾ ಸಬಲೀಕರಣ ವಿಭಾಗದ ಸಂಯೋಜಕಿ ಡಾ.ಅನಿತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net