

ಸಿರವಾರ: ಮಾನ್ವಿಯಲ್ಲಿ ಮಾ.15ರಂದು ಆಯೋಜಿಸಿರುವ ಬೃಹತ್ ಆರೋಗ್ಯ ಮೇಳದ ಕುರಿತು ವಿವಿಧೆಡೆ ಜಾಗೃತಿ ಮೂಡಿಸಲಾಯಿತು.
ಇದನ್ನೂ ಓದಿ:ಮಕ್ಕಳ ಆರೋಗ್ಯ ಮೇಳೆ ನಿಗಾ ವಹಿಸಿ
ತಾಲೂಕಿನ ಹಳ್ಳಿ ಹೊಸೂರು ವ್ಯಾಪ್ತಿಯ ಜಾಲಾಪುರ ಕ್ಯಾಂಪ್, ಬಾಲಕರ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಮಸೀದಿ ಚರ್ಚ್ ಹಾಗೂ ಬಸ್ ನಿಲ್ದಾಣದಲ್ಲಿ ಆರೋಗ್ಯ ಮೇಳದ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮೀ ಮುಂಡಾಸ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ, ದೇವದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರ ಸುರಕ್ಷಣಾಧಿಕಾರಿ ಚಿತ್ರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇತರರಿದ್ದರು.