ರೋಗ ತಡೆಗೆ ಜಾಗೃತಿ

Published on

ಚಿಕ್ಕಬಳ್ಳಾಪುರ: ಪ್ರತಿಯೊಬ್ಬರೂ ಆರೋಗ್ಯ ಬಗ್ಗೆ ತಿಳಿವಳಿಕೆ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್​ ಕುಮಾರ್​ ತಿಳಿಸಿದರು.

ನಗರದ ಡಿಡಿಪಿಐ ಕಚೇರಿ ಆವರಣದಲ್ಲಿನ ಡಾ.ಎ.ಪಿ.ಜೆ ಅಬ್ದುಲ್​ ಕಲಾಂ ಸಭಾಂಗಣದಲ್ಲಿ ರಾಜ್ಯ ಏಡ್ಸ್​ ಪ್ರಿವೆನ್​ ಷನ್​ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್​ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಟಕ, ಜಿಲ್ಲಾ ಕ್ಷಯ ರೋಗ ನಿಮೂರ್ಲನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯು ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಸ ಪ್ರೆಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಾಸ್ಥ$್ಯ ಸಮಾಜ ನಿರ್ಮಾಣಕ್ಕಾಗಿ ಸರ್ಕಾರವು ಶೈಕ್ಷಣಿಕ, ಆರೋಗ್ಯ, ಸಾಮಾಜಿಕ, ಔದ್ಯೋಗಿಕ, ಸಾಂಸತಿಕ ಸೇರಿ ವಿವಿಧ ಯೋಜನೆಗಳಡಿ ಸವಲತ್ತು, ಅನುದಾನ ಒದಗಿಸುತ್ತಿದೆ. ಇವುಗಳ ಬಗ್ಗೆ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ.ರಸಪ್ರಶ್ನೆ ಕಾರ್ಯಕ್ರಮದ ಮೂಲ ಉದ್ದೇಶ ಸಹ ಏಡ್ಸ್​ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವುದಾಗಿದೆ ಎಂದರು.

ವಿಜೇತರಿಗೆ ಬಹುಮಾನ: ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದದ ಬಿಜಿಎಸ್​ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ 6 ಸಾವಿರ, ಮಿಟ್ಟೆಮರಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ದ್ವೀತಿಯ 5 ಸಾವಿರ ಹಾಗೂ ಕೆ.ಸಿ.ಎನ್​.ಇಂಟರ್​ ನ್ಯಾಷನಲ್​ ಸ್ಕೂಲ್​ ವಿದ್ಯಾರ್ಥಿಗಳಿಗೆ ತೃತೀಯ 4 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳ ನೀಡಲಾಯಿತು. ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳ ತಂಡವು ಸೆ.6 ರಂದು ನಡೆಯಲಿರುವ ಯುವ ರಾಜ್ಯ ಮಟ್ಟದ ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net