ಸಿಲಿಂಡರ್ ಬಳಕೆಗೆ ಮುನ್ನ ಜಾಗೃತಿ ಅವಶ್ಯ

Awareness is essential before using cylinders.
ವಿಜಯಪುರದ ಖಾಸಗಿ ಹೊಟೇಲ್‌ನಲ್ಲಿ ಹಮ್ಮಿಕೊಂಡಿದ್ದ ನಮ್ಮ ಅಡುಗೆ ನಮ್ಮ ಜವಾಬ್ದಾರಿ-2024ರ ಕಾರ್ಯಕ್ರಮವನ್ನು ವಿನಯಕುಮಾರ ಪಾಟೀಲ ಉದ್ಘಾಟಿಸಿದರು. ಆಶಿಶ್ ಅಗರವಾಲ್, ಅಮರೇಶ ತಾಂಡೂರ್, ವೀರನಗೌಡ ಪಾಟೀಲ ಮತ್ತಿತರರಿದ್ದಾರೆ.
Published on

ವಿಜಯಪುರ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಸುವ ಮುನ್ನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ತಿಳಿದುಕೊಳ್ಳುವ ಜತೆಗೆ ಸುರಕ್ಷತೆ ಕಾಪಾಡಿಕೊಳ್ಳಬೇಕು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಸಲಹೆ ನೀಡಿದರು.

ಭಾರತ ಸರ್ಕಾರದ ಪೆಟ್ರೋಲಿಯಂ ಮಂತ್ರಾಲಯ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಬಿಪಿಸಿಎಲ್ ಹಾಗೂ ಎಚ್‌ಪಿಸಿಎಲ್ ಆಯಿಲ್ ಕಂಪನಿಗಳ ಸಹಯೋಗದಲ್ಲಿ ಭಾನುವಾರ ನಗರದ ಮಧುವನ ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಹಮ್ಮಿಕೊಂಡಿದ್ದ ನಮ್ಮ ಅಡುಗೆ ನಮ್ಮ ಜವಾಬ್ದಾರಿ-2024ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ ಸ್ಟವ್ ಬಳಸುವಾಗ ಸಣ್ಣ ಪುಟ್ಟ ತೊಂದರೆಗಳು ಕಂಡು ಬಂದರೆ ಕೂಡಲೇ ಗ್ಯಾಸ್ ಏಜೆನ್ಸಿ ಸಿಬ್ಬಂದಿಗೆ ಮಾಹಿತಿ ನೀಡಿ ದುರಸ್ತಿಗೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಮಹಿಳೆಯರಿಗಾಗಿ ನಡೆದ ಪಾಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಎಚ್.ಎನ್. ಮಮದಾಪುರ ನಿರ್ವಹಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಬಿಪಿಸಿಎಲ್ ಕಲಬುರಗಿ ವಿಭಾಗದ ಅಧಿಕಾರಿ ಆಶಿಶ್ ಅಗರವಾಲ್, ಆಹಾರ ಇಲಾಖೆಯ ವ್ಯವಸ್ಥಾಪಕ ಅಮರೇಶ ತಾಂಡೂರ್, ಬಬಲೇಶ್ವರದ ಗುರು ಶಾಂತೇಶ್ವರ ಭಾರತ್ ಗ್ಯಾಸ್ ವಿತರಕ ವೀರನಗೌಡ ಪಾಟೀಲ, ವಿವಿಧ ಗ್ಯಾಸ್ ಏಜೆನ್ಸಿಯ ಮಾಲೀಕರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net