

ವಿಜಯಪುರ: ಡೆಂೆ ತೆಡೆಗೆ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಹಾಗೂ ಸಹಭಾಗಿತ್ವ ಬಹಳ ಮುಖ್ಯ ಎಂದು ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.
ಇಲ್ಲಿನ ಸಿದ್ದಾರ್ಥ ನಗರದ ಡಯಟ್ ರಸ್ತೆ ಕಾಲನಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಡೆಂೆ ರಾಷ್ಟ್ರೀಯ ದಿನಾಚಾರಣೆ’ಯಲ್ಲಿ ಅವರು ಮಾತನಾಡಿದರು.
ಮಳೆಗಾಲದಲ್ಲಿ ಸಾಂಕ್ರಮಿಕ ಕಾಯಿಲೆಗಳ ಹಾವಳಿ ಹೆಚ್ಚಾಗಲಿದೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕೆಂದರು.
ಡಿಎಚ್‌ಒ ಡಾ. ಸಂಪತ್ ಎಂ.ಗುಣಾರಿ ಮಾತನಾಡಿ, ಜಿಲ್ಲೆಯಲ್ಲಿ ಡೆಂೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ವರ್ಷದ ಘೋಷವಾಕ್ಯ ‘ಡೆಂೆ ಸೋಲಿಸಲು ಹೆಜ್ಜೆಗಳು: ಪರಿಶೀಲಿಸಿ, ಸ್ವಚ್ಚಗೊಳಿಸಿ, ಮುಚ್ಚಿಡಿ’ ಎಂಬುದಾಗಿದೆ. ರೋಗದ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಾನ್ ಕಟವಟಿ ಮಾತನಾಡಿ, ಈ ಡೆಂೆ ರೋಗವು ಈಡಿಸ್ ಈಜಿಪ್ತ ಹೆಣ್ಣು ಸೊಳ್ಳೆಯಿಂದ ಹರಡುತ್ತಿದ್ದು, ರೋಗದ ಲಕ್ಷಣಗಳಾದ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ವಸಡುಗಳಿಂದ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಇಂತಹ ಲಕ್ಷಣಗಳು ಕಂಡು ಬಂದರೆ, ಹತ್ತಿರದ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಲು ತಿಳಿಸಿದರು.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.