

ವಿಜಯಪುರ: ವಿಶ್ವ ದೃಷ್ಠಿ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಜಾಗೃತಿ ಜಾಥಾ ನಡೆಯಿತು.
ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ತ ಗುಣಾರಿ ಜಾಥಾಗೆ ಚಾಲನೆ ನೀಡಿದರು.
ಸಿದ್ಧೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ, ಗಾಂಧಿ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ತಲುಪಿ ಜಾಥಾ ಸಂಪನ್ನಗೊಂಡಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೊಲೂರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ, ಸಿಬ್ಬಂದಿ, ಆಶಾಕಾರ್ಯಕರ್ತೆಯರು ಭಾಗವಹಿಸಿದ್ದರು.