ಮದ್ದೂರಲ್ಲಿ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

02M.D.R.2
ಮದ್ದೂರು ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಜಿ.ಆರ್.ಮಂಜುನಾಥ್, ಕರಿಬಸವಯ್ಯ, ನಾರಾಯಣ್, ಮೇರಿ, ಗಂಗಾಧರ್ ಇದ್ದರು.
Published on

ಮದ್ದೂರು: ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾಪಂ ಇಒ ಜಿ.ಆರ್.ಮಂಜುನಾಥ್, ಮತದಾನ ನಮ್ಮ ಹಕ್ಕು. ಅದನ್ನು ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಆ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಮುಂದಾಗಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಜಾಥಾ ಹಮ್ಮಿಕೊಳ್ಳುವ ಮೂಲಕ ಮತದಾನ ಮಹತ್ವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಪುರಸಭಾ ಮುಖ್ಯಾಧಿಕಾರಿ ಕರಿಬಸವಯ್ಯ, ಪ್ರಾಂಶುಪಾಲ ನಾರಾಯಣ್, ಪ್ರಾಧ್ಯಾಪಕರಾದ ಮೇರಿ, ಗಂಗಾಧರ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net