ಜಾಗೃತಿ ಮಾಸಾಚರಣೆ ಸಮಾರೋಪ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್​ ಇಲಾಖೆ, ಅವಳಿ ನಗರದ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಹಯೋಗದಲ್ಲಿ ಜ. 18ರಿಂದ ತಿಂಗಳ ಕಾಲ ಜಿಲ್ಲೆಯಲ್ಲಿ ಆಚರಿಸಲಾದ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ ಸಮಾರೋಪ ಸಮಾರಂಭವನ್ನು ಫೆ. 18ರಂದು ಬೆಳಗ್ಗೆ 11 ಗಂಟೆಗೆ ನಗರದ ಆಲೂರು ವೆಂಕಟರಾವ್​ ಭವನದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ವಿಶ್ವ ವಿದ್ಯಾಲಯ, ಎನ್​ಎಸ್​ಎಸ್​ ಕೋಶ, ಕರ್ನಾಟಕ ಕಲಾ ಕಾಲೇಜು, ಕವಿವಿ ಶಿಕ್ಷಣ ಮಹಾವಿದ್ಯಾಲಯ, ಸರ್​. ಸಿದ್ದಪ್ಪ ಕಂಬಳಿ ಕಾನೂನು ಕಾಲೇಜು, ಕೆಎಸ್​ಆರ್​ಪಿ ಬಟಾಲಿಯನ್​ ವತಿಯಿಂದ ಕೆಸಿಡಿ ವೃತ್ತದಿಂದ ಆಯೋಜಿಸಿರುವ ಕಾಲ್ನಡಿಗೆ ಜಾಥಾ (ವಾಕ್​ಥಾನ್​)ಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಚಾಲನೆ ನೀಡುವರು.

ನಂತರ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಅಪರ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ, ಕರ್ನಾಟಕ ವಿಶ್ವ ವಿದ್ಯಾಲಯ ಕುಲಸಚಿವ ಡಾ. ಎ. ಚನ್ನಪ್ಪ ಭಾಗವಹಿಸುವರು. ಉಪಸಾರಿಗೆ ಆಯುಕ್ತ ನೂರ ಮೊಹಮ್ಮದ ಭಾಷಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net