ಸಾಮರಸ್ಯ, ಸಮಾನತೆಯ ಅರಿವು ಮುಖ್ಯ

15 hkr 05
Published on

ಹಿರೇಕೆರೂರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇಂದು ನಾವೆಲ್ಲರೂ ಸಂವಿಧಾನ ಪೀಠಿಕೆ ಓದುವ ಮೂಲಕ ಭ್ರಾತ್ವತ್ವ, ಸಾಮರಸ್ಯ, ಸಮಾನತೆಯ ಕುರಿತು ಅರಿತುಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.


ತಾಲೂಕಿನ ದೂದಿಹಳ್ಳಿ ಗ್ರಾಮದ ಕಿತ್ತೂರರಾಣಿ ಚನ್ನಮ್ಮ, ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಂದ ಉದ್ಘಾಟಿಸಿ ಅವರು ಮಾತನಾಡಿದರು.


ತಹಸೀಲ್ದಾರ್ ಡಾ.ಎಚ್. ಪ್ರಭಾಕರಗೌಡ, ತಾಪಂ ಇಒ ಶಶಿಧರ್ ಎಚ್., ಬಿಇಒ ಎನ್. ಶ್ರೀಧರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೆಹಬೂಬ್ ನದಾಫ್, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಪಂ ಹಾಗೂ ಗ್ರಾಪಂ ಸದಸ್ಯರು, ಕಿತ್ತೂರರಾಣಿ ಚನ್ನಮ್ಮಾ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರು, ಮುಖ್ಯಶಿಕ್ಷಕರು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net