

ಉಡುಪಿ: ಏಡ್ಸ್ ರೋಗ ಹರಡುವಿಕೆ ಮತ್ತು ಲಕ್ಷಣಗಳ ಬಗ್ಗೆ ಯುವಜನತೆ ಅರಿವು ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಮಣಿಪಾಲದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ರೋಟರಿ, ಲಯನ್ಸ್ ಕ್ಲಬ್ ಆಶ್ರಯದಲ್ಲಿ ಸೋಮವಾರ ಅಂತಾರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಎಚ್ಐವಿ, ಏಡ್ಸ್ ಅರಿವಿನ ಮಾಸಾಚರಣೆ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲೆ ಸಹನಾ ಅಧ್ಯಕ್ಷತೆ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುವಾರ್ ಶೆಟ್ಟಿ ನಶಾ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ವೈದ್ಯಾಧಿಕಾರಿ ಡಾ.ವೀಣಾಕುಮಾರಿ, ರೋಟರಿ ಅಧ್ಯಕ್ಷ ಟಿ.ಗುರುರಾಜ ಭಟ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ರಘುನಾಥ ನಾಯಕ ಉಪಸ್ಥಿತರಿದ್ದರು.
ಉಪನ್ಯಾಸಕಿ ವಂದನಾ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮೇಲ್ವಿಚಾರಕ ಮಹಾಬಲೇಶ್ವರ ನಿರೂಪಿಸಿದರು. ಶಿವಪ್ರಸಾದ್ ವಂದಿಸಿದರು.
ರಕ್ತದಾನ ಎಲ್ಲಾ ದಾನಕ್ಕಿಂತ ಶ್ರೇಷ್ಠ ದಾನವಾಗಿದ್ದು, ಯುವಜನತೆ ರಕ್ತದಾನದಂತಹ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. -ಡಾ.ಕೆ.ವಿದ್ಯಾಕುವಾರಿ ಜಿಲ್ಲಾಧಿಕಾರಿ
-ಡಾ.ಕೆ.ವಿದ್ಯಾಕುವಾರಿ ಜಿಲ್ಲಾಧಿಕಾರಿ