

ಪಡುಬಿದ್ರಿ: ದೀಪದಿಂದ ಹೊರಟ ಬೆಳಕು ಎಲ್ಲೆಡೆ ಪಸರಿಸಿದಂತೆ ಪತ್ರಕರ್ತರು ಬರವಣಿಗೆ, ಸುದ್ದಿಯ ಮೂಲಕ ಜ್ಞಾನದ ಅರಿವನ್ನು ಸಮಾಜಕ್ಕೆ ಪಸರಿಸುತ್ತಿರುತ್ತಾರೆ. ದೀಪಾವಳಿ ಹಾಗೂ ಪತ್ರಕರ್ತರ ನಡುವೆ ಪರಸ್ಪರ ಸಂಬಂಧವಿದೆ ಎಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಪ್ರಧಾನ ತಂತ್ರಿ ಕೆ.ಪಿ.ಶ್ರೀನಿವಾಸ ಮಡುಂಬು ಹೇಳಿದರು.
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ಕ್ಲಬ್‌ನಲ್ಲಿ ಭಾನುವಾರ ದೀಪಾವಳಿ ಸಂಭ್ರಮಾಚರಣೆ ಉದ್ಘಾಟಿಸಿ ಮಾತನಾಡಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿಗಳಾದ ಶ್ರೀಧರ ಶೇಣವ, ದೀಪಕ್‌ಕುಮಾರ್ ಎರ್ಮಾಳು, ನವೀನ್ ಎನ್. ಶೆಟ್ಟಿ, ಡಾ.ಮನೋಜ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಕೋಶಾಧಿಕಾರಿ ಹೇಮನಾಥ್ ಪಡುಬಿದ್ರಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಹರೀಶ್ ಹೆಜ್ಮಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಸಂತೋಷ್ ನಾಯ್ಕ ವಂದಿಸಿದರು. ಮಾಜಿ ಅಧ್ಯಕ್ಷ ಪ್ರಕಾಶ್ ಸುವರ್ಣ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು.